ಕೊರೊನಾ ಆತಂಕ-ಆಸ್ಪತ್ರೆಯಲ್ಲೇ ಸೋಂಕಿತ ವೃದ್ಧೆ ಆತ್ಮಹತ್ಯೆಗೆ ಶರಣು…

119
firstsuddi

ಬೆಂಗಳೂರು : ಕೊರೊನಾ ಸೋಂಕಿನ ಭಯದಿಂದ ಸೋಂಕಿತ ವೃದ್ಧೆಯೊಬ್ಬರು ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. 60 ವರ್ಷದ ಸೋಂಕಿತ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ವೃದ್ಧೆಗೆ ಜು.1ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೃತ ವೃದ್ಧೆ ಕೊರೊನಾ ಸೋಂಕು ತಗುಲಿದೆ ಎಂದು ತೀವ್ರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಹೀಗಾಗಿ ಆಸ್ಪತ್ರೆಯ ಬಾತ್ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದ ಸ್ಥಳಕ್ಕೆ ಧಾವಿಸಿದ ಉತ್ತರ ವಿಭಾಗದ ಮಲ್ಲೇಶ್ವರಂನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.