ಬೆಂಗಳೂರು : ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೂ ಕೊರೊನಾ ಕಂಟಕ ಎದುರಾಗಿದ್ದು, ಅವರ ಕಾರ್ ಡ್ರೈವರ್‍ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಹೀಗಾಗಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 18 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಸೋಂಕಿತ ಪೊಲೀಸರ ಸಂಖ್ಯೆ 720ಕ್ಕೆ ಏರಿಕೆಯಾಗಿದೆ.










