ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು ಮಾಡುವ ಕಠಿಣ ಕ್ರಮಕೈಗೊಳ್ಳಿ : ಸಿದ್ದರಾಮಯ್ಯ ಆಗ್ರಹ…

178
firstsuddi

ಬೆಂಗಳೂರು : ಗರ್ಭಿಣಿಯೋರ್ವರಿಗೆ ಹೆರಿಗೆ ನೋವಿನಿಂದ ಎಷ್ಟೂ ಆಸ್ಪತ್ರೆ ಸುತ್ತಿದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ತಾಯಿಯ ಗರ್ಭದಲ್ಲೇ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗಳ ಮೇಲೆ ಸರ್ಕಾರ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟರ್‍ನಲ್ಲಿ ಬರೆದುಕೊಂಡಿರುವ ಅವರು, ಹೆರಿಗೆಗಾಗಿ ಬೆಂಗಳೂರಿನ ಆಸ್ಪತ್ರೆಗಳೆಲ್ಲ ಸುತ್ತಾಡಿದ ಗರ್ಭಿಣಿಯೊಬ್ಬರು ಎಲ್ಲಿಯೂ ಸೇರಿಸಿಕೊಳ್ಳದೆ ಇದ್ದಾಗ ಕೊನೆಗೆ ಆಟೋರಿಕ್ಷಾದಲ್ಲಿಯೇ ಹಡೆದ ಪರಿಣಾಮ ಹಸುಕೂಸನ್ನು ಕಳೆದುಕೊಳ್ಳಬೇಕಾಯಿತು. ಮುಖ್ಯಮಂತ್ರಿಗಳೇ ಮೊದಲು ಈ ನತದೃಷ್ಟ ತಾಯಿಯ ಮಗುವಿನ ಕೊಲೆಗಡುಕ ಆಸ್ಪತ್ರೆಗಳ ಮೇಲೆ ಕ್ರಮಕೈಗೊಳ್ಳಿ.
ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಹೆಚ್ಚು, ಬೇರೆ ಕಾಯಿಲೆಯ ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಸಾಯುತ್ತಿದ್ದಾರೆ. ಮುಖ್ಯಮಂತ್ರಿಗಳೇ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು ಮಾಡುವ ಕಠಿಣ ಕ್ರಮಕೈಗೊಳ್ಳಿ. ನಿಮ್ಮ ಹುಸಿಬೆದರಿಕೆಗೆ ಅವರು ಜಗ್ಗುವವರಲ್ಲ ಎಂದು ಟ್ವಿಟರ್ ಮೂಲಕ ಆಗ್ರಹಿಸಿದ್ದಾರೆ.