ಮೂಡಿಗೆರೆ : ನ್ಯಾಯಬೆಲೆ ಅಂಗಡಿಯಲ್ಲಿ ಸಾಮಾಜಿಕ ಅಂತರ ಮರೆತ ಪಡಿತರದಾರರು…

269
firstsuddi

ಕೊಟ್ಟಿಗೆಹಾರ: ಕೊರೊನಾ ಎಲ್ಲೆಡೆ ರಣಕೇಕೆ ಹಾಕುತ್ತಿದ್ದರೆ ಗಬ್ಗಲ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರದಾರರು ಸಾಮಾಜಿಕ ಅಂತರ ಮರೆತು ಗುಂಪುಗೂಡಿ ಪಡಿತರ ಪಡೆಯುತ್ತಿರುವುದು ಅಪಾಯವನ್ನು ಆಹ್ವಾನಿಸುವಂತಿದೆ.
ಸರತಿ ಸಾಲಿನಲ್ಲಿ ನಿಂತು ಪಡಿತರಕ್ಕಾಗಿ ಕಾಯಬೇಕಾಗಿದ್ದ ಪಡಿತರದಾರರು ಪಡಿತರಕ್ಕಾಗಿ ತಂದ ಚೀಲಗಳನ್ನು ಸಾಲಾಗಿ ಇಟ್ಟು ಒಂದೆಡೆ ಗುಂಪುಗೂಡುತ್ತಿದ್ದಾರೆ. ಕೂಲಿ ಕಾರ್ಮಿಕರೆ ಹೆಚ್ಚಾಗಿರುವ ಈ ಭಾಗದಲ್ಲಿ ಸಾಮಾಜಿಕ ಅಂತರ ಮರೆತು ಗುಂಪುಗೂಡಿರುವುದು ಅಪಾಯಕಾರಿಯಾಗಿದೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಆಹಾರ ನಿರೀಕ್ಷಕ ಇಂದ್ರೇಶ್ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ವಿತರಣೆ ಅಡಚಣೆಯಾಗಿದೆ. ಇದರಿಂದಾಗಿ ತ್ವರಿತವಾಗಿ ಪಡಿತರ ನೀಡಲು ಸಾದ್ಯವಾಗದೇ ಇರುವುದರಿಂದ ಜನದಟ್ಟಣೆ ಹೆಚ್ಚಾಗಿದೆ. ಆದರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ನೀಡುವಂತೆ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.