ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ-ಮೃತರ ಸಂಖ್ಯೆ 11ಕ್ಕೆ ಏರಿಕೆ…

169
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ನಗರದ ಮಾರ್ಕೆಟ್ ರಸ್ತೆ ನಿವಾಸಿ 70 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೃತ ವೃದ್ಧನನ್ನು ಭಾನುವಾರು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಸೋಮವಾರ ಅದರ ವರದಿ ಬಂದಿದ್ದು, ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಆದರೆ ನಿನ್ನೆ ರಾತ್ರಿ ತೀವ್ರ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.