ಹೈದರಾಬಾದ್ : ಮಾಸ್ಕ್ ಧರಿಸದೇ ಇದ್ದಕ್ಕೆ ಪೊಲೀಸರಿಂದ ಹಲ್ಲೆಗೊಳಗಾದ ಯುವಕ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಚಿರಾಲದಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಮಾಸ್ಕ್ ಧರಿಸದೇ ಇದ್ದ ಯುವಕನ ಮೇಲೆ ಪೊಲೀಸರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದು, ಕೂಡಲೇ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಯುವಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ.










