ಮಂಗಳೂರು : ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣು…

185
firstsuddi

ಮಂಗಳೂರು : ಕೆರೆಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಶರವೂರು ಎಂಬಲ್ಲಿ ನಡೆದಿದೆ. ಶರವೂರು ಸಮೀಪದ ಪಾಂಜೋಡಿ ಕಾಲೋನಿ ನಿವಾಸಿ ಸಂಧ್ಯಾ(22) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದ್ದು, ಮೃತ ಯುವತಿ ಇಂದು ಬೆಳಿಗ್ಗೆ ತಮ್ಮ ಮನೆಯ ಸಮೀಪವಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.