ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 49,310 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 740 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 30,601ಕ್ಕೆ ಏರಿಕೆಯಾಗಿದೆ. ದೇಶದಲಿ 12,87,945ಮಂದಿ ಸೋಂಕಿತರ ಪೈಕಿ 8,17,209 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 4,40,135 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










