ಶ್ರೀನಗರ : ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ರಣಬೀರ್ಗರ್ಹ್ ಎಂಬ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಯೋಧರು ಇಂದು ಮುಂಜಾನೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳೀಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಇನ್ನೂ ಕೆಲವು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಯೋಧರು ಕಾರ್ಯಾಚರಣೆ ಮುಂದುವರೆಸಿದ್ದಾರೆ.










