ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ…

207
firstsuddi

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಈಗಾಗಲೇ ಬಿಡುಗಡೆಗೆ ಸಜ್ಜಾಗಿರುವ ಸಿನಿಮಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಭಿನಯದ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ದರ್ಶನ್ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಏಪ್ರಿಲ್ 9ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ ದೇಶಾದ್ಯಂತ ಮಹಾಮಾರಿ ಕೊರೊನಾ ಅಟ್ಟಹಾಸದಿಂದ ಲಾಕ್‍ಡೌನ್ ಆಗಿರುವ ಕಾರಣ ಚಿತ್ರಮಂದಿರಗಳು ತೆರೆಯದೇ ಇರುವ ಕಾರಣ ಚಿತ್ರ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದ ಬೇಸರಗೊಂಡಿದ್ದ ಅಭಿಮಾನಿಗಳ ಕೋರಿಕೆಯಂತೆ ಈ ಹಿಂದೆ ಚಿತ್ರದ ಹಾಡುಗಳು ಹಾಗೂ ಪೋಸ್ಟರ್‍ಗಳು ಬಿಡುಗಡೆಯಾಗಿದ್ದವು. ಈಗ ಚಿತ್ರದ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಅವರ ಹುಟ್ಟುಹಬ್ಬದ ಅಂಗವಾಗಿ ರಾಬರ್ಟ್ ಚಿತ್ರತಂಡದಿಂದ ದರ್ಶನ್ ಅವರು ಕೈಯಲ್ಲಿ ಗಿಟಾರ್ ಹಿಡಿದು ಕುಳಿತಿರುವ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಇದನ್ನು ದರ್ಶನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.