ಶ್ರೀನಗರ : ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೈನಿಕರು ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದ್ದಾರೆ. ಜಮ್ಮು ಕಾಶ್ಮೀರಾದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೈನಿಕರು ಜಮ್ಮು ಕಾಶ್ಮೀರಾದ ಹಳ್ಳಿಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭಾರತೀಯ ಯೋಧರು ಪಾಕಿಸ್ತಾನ ಸೇನೆಯ ಓರ್ವ ಯೋಧ ಮೃತಪಟ್ಟಿದ್ದು, ದಾಳಿಯಲ್ಲಿ 8 ಮಂದಿ ಪಾಕ್ ಯೋಧರು ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.










