ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಜೀವ ಬೆದರಿಕೆ ಬಂದ ಬೆನ್ನಲ್ಲೇ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಡಾ. ಕೆ. ವಿ ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಸಿಂಧೂ ಬಿ ರೂಪೇಶ್ ಅವರು ಬೆಂಗಳೂರಿಗೆ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಝನ್ ಸರ್ವಿಸ್ ವಿಭಾಗದ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.










