ಮಂಗಳೂರು : ವಾಟ್ಸಾಪ್ ಗ್ರೂಪ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಜ್ಪೆ ನಿವಾಸಿ ರಂಜಿತ್ ಎಂದು ಗುರುತಿಸಲಾಗಿದೆ.
ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಸಭೆಯೊಂದರಲ್ಲಿ ಎಚ್ಚರಿಕೆಯನ್ನು ನೀಡಿದ್ದರು. ಇದರ ಬಗ್ಗೆ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಬಹಿರಂಗವಾಗಿ ಜಿಲ್ಲಾಧಿಕಾರಿಯನ್ನು ಕೊಲೆ ಮಾಡಬೇಕು ಎಂದು ಬೆದರಿಕೆ ಹಾಕಿದ್ದು, ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಅದರಂತೆ ಬಜ್ಪೆ ನಿವಾಸಿ ರಂಜಿತ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.










