ಕಲಬುರಗಿ : ಆಸ್ಪತ್ರೆಯ ಶೌಚಾಲಯದಲ್ಲಿ ಬಿದ್ದು ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬಸವರಾಜ್ ಹಿರೇಮಠ್(42) ಮೃತ ದುರ್ಧೈವಿ ಎಂದು ಗುರುತಿಸಲಾಗಿದ್ದು, ಮೃತ ವ್ಯಕ್ತಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಶೌಚಾಲಯಕ್ಕೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಒದ್ದಾಡಿ ಅಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಬಿದ್ದು ಗಂಟೆಗಳೇ ಕಳೆದರೂ ಆಸ್ಪತ್ರೆ ಸಿಬ್ಬಂಧಿ ಗಮನಿಸಿರಲಿಲ್ಲ. ಹೀಗಾಗಿ ಮೃತ ವ್ಯಕ್ತಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷದಿಂದಲೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.










