ಶ್ರೀನಗರ : ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಸೇನೆಯು ಜಮ್ಮು ಕಾಶ್ಮೀರಾದ ಪೂಂಚ್ ಜಿಲ್ಲೆಯ ಮಂದಾರ ಉಪವಿಭಾಗದ ಬಾಲಕೋಟ್ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










