ನವದೆಹಲಿ : ರಾಜ್ಯಸಭಾ ಸದಸ್ಯ ಅಮರ್ ಸಿಂಗ್(64) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 6 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಕೆಲವು ತಿಂಗಳಿನಿಂದ ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಅಮರ್ ಸಿಂಗ್ ಅವರು ಉತ್ತರ ಪ್ರದೇಶದ ಭಾರತೀಯ ರಾಜಕಾರಣಿಯಾಗಿದ್ದು, ಸಮಾಜವಾದಿ ಪಕ್ಷದ ನಾಯಕರಲ್ಲಿ ಒಬ್ಬರಾಗಿದ್ದರು. ಹಾಗೂ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಹಾಗೂ ಭಾರತೀಯ ಸಂಸತ್ತಿನ ಮೇಲ್ಮನೆಯ ರಾಜ್ಯಸಭೆಯ ಸದಸ್ಯರಾಗಿದ್ದರು. ಇವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ.










