ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ ಅವರ ಪುತ್ರಿಗೂ ಕೂಡಾ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಿನ್ನೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಕಾವೇರಿ ನಿವಾಸದಲ್ಲಿರುವವರಿಗೆ ಎಲ್ಲರಿಗೂ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ಈ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರಿ ಪದ್ಮಾವತಿ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಮಣಿಪಾಲ್ ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.










