ಅಯೋಧ್ಯೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಜ್ಯದ 8 ಮಂದಿಗೆ ಆಹ್ವಾನ…

291
firstsuddi

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ 8 ಮಂದಿಗೆ ಆಹ್ವಾನ ನೀಡಲಾಗಿದೆ. ಆಗಸ್ಟ್ 5ರಂದು ಶ್ರೀ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು, ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿದ್ಧತಾ ಕಾರ್ಯವನ್ನು ಪರಿಶೀಲನೆ ನಡೆಸಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ವಿಶೇಷ ಆಹ್ವಾನಿತರು

1. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
2. ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ.
3. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ.
4. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ.
5. ಸುತ್ತೂರು ಮಠದ ಶ್ರೀಗಳು.
6. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ.
7. ಇಸ್ಕಾನ್‍ನ ಮಧುಪಂಡಿತ ದಾಸ್.
8. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ