ರಾಮ ಮಂದಿರ ಶಿಲಾನ್ಯಾಸ-ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದಿನಿಂದ ಆ.6ರ ವರೆಗೆ 144 ಸೆಕ್ಷನ್ ಜಾರಿ…

134
firstsuddi

ಮಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿರುವುದರಿಂದ ಮಂಗಳೂರಿನಲ್ಲಿ ಇರುವ ಮತೀಯ, ರಾಜಕೀಯ ಗಲಭೆಗಳನ್ನು ಮತ್ತು ಸಾರ್ವಜನಿಕ ಪ್ರಾಣ, ಆಸ್ತಿಪಾಸ್ತಿ ಹಾನಿಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ರಾತ್ರಿ 8 ಗಂಟೆಯಿಂದ ಆಗಸ್ಟ್ 6 ಬೆಳಿಗ್ಗೆ 6 ಗಂಟೆ ವರೆಗೆ ಮಂಗಳೂರು ನಗರ ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಕಲಂ: 144 ರ ಅನ್ವಯ ನಿರ್ಬಂಧಕ ಆಜ್ಞೆಯನ್ನು ವಿಧಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶ ಜಾರಿಯಾದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು:

1. ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವಾಗ 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ.
2. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗಾದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರೆ ಯಾವುದೇ ವಸ್ತುಗಳನ್ನು ತೆಗೆದುಕೊಳ್ಳುವಂತಿಲ್ಲ.
3. ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಸಿಡಿಸುವಂತಿಲ್ಲ.
4. ಯಾವುದೇ ರೀತಿಯ ಸಾರ್ವಜನಿಕ ಮೆರವಣೀಗೆ, ಪ್ರತಿಭಟನೆ, ಧರಣಿ, ಮುಷ್ಕರ ರಾಶಸ್ತಾ ರೋಕೊ ಮುತ್ತಿಗೆ, ಬೈಕ್ ರ್ಯಾಲಿ ಸಮಾರಂಭಗಳನ್ನು ನಡೆಸುವಂತಿಲ್ಲ.
5. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಶೇಖರಿಸುವಂತಿಲ್ಲ.
6. ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿ ಕೃತಿಗಳ ಪ್ರದರ್ಶಿಸುವಂತಿಲ್ಲ.
7. ಸಭ್ಯತ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸುವ(ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸುವುದು, ಬಹಿರಂಗ ಘೋಷಣೆ ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ.
ಈ ನಿಷೇಧಾಜ್ಞೆ ಇಂದು ರಾತ್ರಿ 8 ಗಂಟೆಯಿಂದ 06-08-2020 ರ ಬೆಳಿಗ್ಗೆ 6 ಗಂಟೆ ವರೆಗೆ ಬೆಂಗಳೂರು ನಗರ ಪೊಲಿಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.