ಶಿರಾ ಶಾಸಕ ಸತ್ಯನಾರಾಯಣ ನಿಧನ…

198
firstsuddi

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್ ಶಾಸಕ ಮಾಜಿ ಸಚಿವ ಬಿ ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಸತ್ಯನಾರಾಯಣ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ಬಾರಿ ಶಾಸಕರಾಗಿದ್ದ ಸತ್ಯನಾರಾಯಣ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜೆ ಎಚ್ ಪಟೇಲ್ ಸಂಪುಟದಲ್ಲಿ ಕಾರ್ಮಿಕ ಸಚಿವ ಹಾಗೂ ಕುಮಾರಸ್ವಾಮಿ ಅವಧಿಯಲ್ಲಿ ನೀರು ಪೊರೈಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.