ಮೂಡಿಗೆರೆ : ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಬಿರುಗಾಳಿ ಮಳೆಯಿಂದಾಗಿ ಬಾಳೆತೋಟ ಸಂಪೂರ್ಣ ನಾಶವಾಗಿರುವ ಘಟನೆ ತಾಲ್ಲೂಕಿನ ಮಗ್ಗಲಮಕ್ಕಿ ಸಮೀಪದ ಕೆಂಬತ್ತಮಕ್ಕಿ ಗ್ರಾಮದಲ್ಲಿ ನಡೆದಿದೆ.
ರೈತ ಕೆಂಬತ್ತಮಕ್ಕಿ ರಾಜಣ್ಣ ಸುಮಾರು 6.5 ಎಕರೆ ಪ್ರದೇಶದಲ್ಲಿ ಬಾಳೆ ಬೆಳೆದಿದ್ದು, ಕಳೆದ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಈಗಾಗಲೇ ಕೊಯ್ಲಿನ ಹಂತಕ್ಕೆ ಬಂದಿದ್ದ 9000 ಬಾಳೆ ಸಂಪೂರ್ಣ ನೆಲಸಮವಾಗಿದ್ದು, ಸುಮಾರು 30 ಲಕ್ಷಕ್ಕೂ ಅಧಿಕ ನಷ್ಟವಾಗಿದೆ ಎನ್ನಲಾಗಿದೆ.










