ರಾಮ ಜನ್ಮಭೂಮಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗೆ ಗೌರವ ಸಮರ್ಪಣೆ…

128
firstsuddi

ಉಡುಪಿ : ಅಯೋಧ್ಯೆಯಲ್ಲಿ ಇಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರುತ್ತಿದ್ದ ಸಂದರ್ಭದಲ್ಲಿ ರಾಮ ಜನ್ಮಭೂಮಿ ಆಂದೋಲನದಲ್ಲಿ ಸುದೀರ್ಘ ಮಂಚೂಣಿಯಲ್ಲಿದ್ದು ಧೀಮಂತ ಮಾರ್ಗದರ್ಶನಗೈದ ಪೇಜಾವರ ಮಠಾಧೀಶರಾಗಿದ್ದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪೀಠ, ಭಾವಚಿತ್ರಕ್ಕೆ ಉಡುಪಿ ಪೇಜಾವರ ಮಠದಲ್ಲಿ ವಿಶೇಷ ಅಲಂಕಾರ ಮಾಡಿ ಮಂಗಳಾರತಿ ಬೆಳಗಿ ಗೌರವ ಅರ್ಪಿಸಲಾಯಿತು. ಈ ವೇಳೆ ಪೂಜೆಯಲ್ಲಿ ಭಾಗಿಯಾಗಿದ್ದ ಭಕ್ತರಿಗೆ ಸಿಹಿತಿಂಡಿ ವಿತರಿಸಲಾಯಿತು. ಮಠದ ದಿವಾನರಾದ ಎಂ. ರಘುರಾಮ ಆಚಾರ್ಯ, ಕೊಟ್ಟಾರಿಗಳಾದ ಸಂತೋಷ್ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.