ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 92 ಮಂದಿಗೆ ಕೊರೊನಾ ದೃಢ…

222
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 92 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1706ಕ್ಕೆ ಏರಿಕೆಯಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತದಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಚಿಕ್ಕಮಗಳೂರು-33, ತರೀಕೆರೆ-31, ಕಡೂರು-11, ಶೃಂಗೇರಿ-6, ಮೂಡಿಗೆರೆ-5, ಎನ್.ಆರ್. ಪುರ-4 ಹಾಗೂ ಕೊಪ್ಪ ತಾಲ್ಲೂಕಿನಲ್ಲಿ 2 ಪ್ರಕರಣ ಪತ್ತೆಯಾಗಿದೆ.