ಕೆ.ಜಿ. ಹಳ್ಳಿ ಗಲಭೆ ಪ್ರಕರಣ-ಪೊಲೀಸರ ಗೋಲಿಬಾರ್ ಗೆ ಮೂವರು ಬಲಿ-110 ಮಂದಿ ಬಂಧನ…

192
firstsuddi

ಬೆಂಗಳೂರು : ಕೆ.ಜಿ. ಹಳ್ಳಿ ಗಲಭೆ ಪ್ರಕರಣದಿಂದ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವೆ ಮನೆ ಸಂಪೂರ್ಣ ಸುಟ್ಟ ಭಸ್ಮವಾಗಿದೆ. ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ಥಿನ ಮನೆ ಬೆಂಕಿಗಾಹುತಿಯಾಗಿದ್ದು, ಪಾಳು ಮನೆಯಂತೆ ಭಾಸವಾಗುತ್ತಿದೆ. ಪರಿಣಾಮ ಅಕ್ಕಪಕ್ಕದ ರಸ್ತೆ, ಮನೆಗಳಲ್ಲಿ ನೀರವ ಮೌನ ಆವರಿಸಿದೆ. ಸದ್ಯಕ್ಕೆ ಪೊಲೀಸರು ಕೆ.ಜಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ಮಾರ್ಗಗಳನ್ನು ಬಂದ್ ಮಾಡಿದ್ದಾರೆ.
ಕಿಡಿಗೇಡಿಗಳು ಸ್ಥಳಕ್ಕೆ ಬಂದ ಪೊಲೀಸರ ಮೇಲೂ ದಾಳಿ ನಡೆಸಿದ್ದು, ಸಿಕ್ಕ ಸಿಕ್ಕ ವಸ್ತಗಳಿಗೆಲ್ಲಾ ಬೆಂಕಿ ಹಚ್ಚಿದ್ದರು. ಕೊನೆಗೆ ರಾತ್ರಿಯೆಲ್ಲಾ ಫೀಲ್ಡ್‍ಗೆ ಇಳಿದಿದ್ದ ಪೊಲೀಸರು 110 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದ್ದು, ಗಾಯಗೊಂಡ ಪೊಲೀಸರಿಗೆ ನಗರದ ಹಲವು ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ತಲೆ, ಬೆನ್ನು, ಮುಖಕ್ಕೆ ಸೇರಿದಂತೆ ಹಲವು ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ.
ಅಲ್ಲದೇ ಈ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಆರೋಪಿಗಳಿಗೆ ಗಾಯವಾಗಿದ್ದು, 10 ಜನರಲ್ಲಿ 6 ಜನ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪರಾರಿಯಾಗಿದ್ದು, ಈಗಾಗಲೇ ಪೊಲೀಸರ ಗೋಲಿಬಾರ್‍ಗೆ ಮೂವರು ಬಲಿಯಾಗಿದ್ದಾರೆ.