ಚಲಿಸುತ್ತಿದ್ದ ಬಸ್‍ನಲ್ಲಿ ಆಕಸ್ಮಿಕ ಬೆಂಕಿ-ಐವರು ಸಜೀವ ದಹನ…

175
firstsuddi

ಚಿತ್ರದುರ್ಗ : ಚಲಿಸುತ್ತಿದ್ದ ಬಸ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಐವರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿ ಬಳಿ ನಡೆದಿದೆ. ವಿಜಯಪುರ ಮೂಲದ ಕವಿತಾ(5), ನಿಶ್ವಿತಾ(3), ಸ್ಪರ್ಷಾ(8), ಕವಿತಾ(29) ಹಾಗೂ ಶಿಲಾ(33) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. 38 ಮಂದಿ ಪ್ರಯಾಣಿಕರಿದ್ದ ಕೆಎ-51 ಎಡಿ 7449 ಎಂಬ ಕುಕ್ಕೆ ಟ್ರಾವೆಲ್ಸ್ ಖಾಸಗಿ ಬಸ್ ಹಿರಿಯೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಇಂಜಿನ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಹೊರಗೆ ಬರಲು ಪ್ರಯತ್ನಿಸಿದ್ದಾರೆ. ಬಳಿಕ ಬೆಂಕಿ ಸಂಪೂರ್ಣ ಬಸ್‍ಗೆ ವ್ಯಾಪಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ. ಹಾಗೂ ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಭವಿಸುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.