ಹಾಸನ : ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಿಳಿದು ರೈತ ಸ್ಥಳದಲ್ಲೇ ಸಾವು…

145
firstsuddi

ಹಾಸನ : ಹೊಲದಲ್ಲಿ ವಿದ್ಯುತ್ ತಂತಿ ತುಳಿದು ರೈತ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ. ಚಂದ್ರೇಗೌಡ(45) ಮೃತ ರೈತ ಎಂದು ಗುರುತಿಸಲಾಗಿದ್ದು, ಮೃತ ರೈತ ತಮ್ಮ ಹೊಲದಲ್ಲಿ ಬೆಳೆದ ಶುಂಠಿ ಬೆಳೆಗೆ ಔಷಧಿ ಸಿಂಪಡಣೆ ಮಾಡಲು ತೆರಳಿದ್ದಾಗ ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಪರಿಣಾಮ ರೈತ ಚಂದ್ರೇಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಬೇಲೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.