ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ-ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಚೆಕ್ ವಿತರಣೆ…

150
firstsuddi

ಕೊಡಗು : ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ತಲಾಕಾವೇರಿಯ ಪ್ರಧಾನ ಅರ್ಚಕರಾದ ನಾರಾಯಣ್ ಆಚಾರ್ ಹಾಗೂ ಸೋದರ ಆನಂದತೀರ್ಥ ಅವರ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ತಲಾ 5 ಲಕ್ಷ ರೂ ಪರಿಹಾರ ಚೆಕ್ ವಿತರಣೆ ಮಾಡಿದ್ದಾರೆ. ಮೃತ ಅರ್ಚಕ ನಾರಾಯಣ ಆಚಾರ್ ಅವರ ಪರಿಹಾರ ಹಣದಲ್ಲಿ ಇಬ್ಬರು ಮಕ್ಕಳಿಗೆ ತಲಾ 2.5 ಲಕ್ಷ ಪರಿಹಾರ ಚೆಕ್ ವಿತರಿಸಿದರು. ಹಾಗೂ ಆನಂದ ತೀರ್ಥ ಅವರು ಮದುವೆಯಾಗದ ಕಾರಣ ಅವರ ತಂಗಿ ಸುಶೀಲಾ ಅವರಿಗೆ 5 ಲಕ್ಷ ರೂ ಪರಿಹಾರ ಚೆಕ್ ನೀಡಿದ್ದಾರೆ.