ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,982 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26,47,664ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 941 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 50,921ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 26,47,664 ಮಂದಿ ಸೋಂಕಿತರ ಪೈಕಿ 19,19,843 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 6,76,900 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










