ಯೋಧರ ಬಲಿದಾನಕ್ಕೆ ಪ್ರತೀಕಾರ-ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ…

197
firstsuddi

ಶ್ರೀನಗರ : ಜಮ್ಮು ಕಾಶ್ಮೀರಾದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಉಗ್ರರ ಗುಂಡಿನ ದಾಳಿಗೆ ಇಬ್ಬರು ಸಿ.ಆರ್.ಪಿ.ಎಫ್ ಯೋಧರು ಹಾಗೂ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದರು. ಬಳಿಕ ಕಾರ್ಯಾಚರಣೆ ಮುಂದುವರೆಸಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಿಗ್ಗೆ ಬಾರಾಮುಲ್ಲಾ ಜಿಲ್ಲೆಯ ಕೀರಿ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು. ಬಳಿಕ ಯೋಧರು ಕೀರಿ ಪ್ರದೇಶದ ಸುತ್ತಾಮುತ್ತಾ ಉಗ್ರರಿಗಾಗಿ ಶೋಧಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಉಳಿದ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.