ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ ; ನಟ ಪ್ರಥಮ್ ವಿರುದ್ಧ ಎಫ್‍ಐಆರ್ ದಾಖಲು…

216
firstsuddi

ಬೆಂಗಳೂರು : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂಬ ಆರೋಪದ ಮೇಲೆ ಸಂಘಟನೆಯ ನಾಯಕರು ನೀಡಿದ ದೂರಿನನ್ವಯ ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಅವರ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ನಟ ಪ್ರಥಮ್ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಇದರಿಂದ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು SDPI ಸಂಘಟನೆಯ ಕಾರ್ಯಕರ್ತ ಉಮರ್ ಫಾರೂಕ್ ಎಂಬುವವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಉಮರ್ ಫಾರೂಕ್ ಅವರು ನೀಡಿದ ದೂರನ್ನು ಆಧರಿಸಿ ನಟ ಪ್ರಥಮ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.