ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ…

175
firstsuddi

ಬೆಂಗಳೂರು : ಇಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು. ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಂ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ನೀಲನಕ್ಷೆಯನ್ನು ಮಂಡಿಸಿದರು. ಇದಕ್ಕೆ ಒಪ್ಪಿದ ಮಾನ್ಯ ಮುಖ್ಯಮಂತ್ರಿಗಳು ಹಂತ ಹಂತವಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಣಕಾಸು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಕೃಷಿ ಹಾಗು ಸಾಂಸ್ಕೃತಿಕ ಸಂಘದ ಅಧ್ಯಕ್ಷರು ಹಾಗು ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಮ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು