ಬೆಂಗಳೂರು : ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಕೊರೊನಾ ರೋಗಿಗಳಿಗಾಗಿ ತಮ್ಮ ಪ್ಲಾಸ್ಮಾ ದಾನ ಮಾಡಿದ್ದಾರೆ. ಕೊರೊನಾ ಸೋಂಕಿಗೆ ನೀಡುತ್ತಿರುವ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಚಿಕಿತ್ಸೆ ಕೂಡಾ ಒಂದಾಗಿದ್ದು, ಇದರಿಂದ ಶಾಸಕ ಡಾ. ರಂಗನಾಥ್ ಹಾಗೂ ಅವರ ಸಹೋದರ ಡಾ. ರಾಮಚಂದ್ರ ಅವರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗುತ್ತಿದ್ದಂತೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ ಪ್ಲಾಸ್ಮಾ ದಾನ ಮಾಡಿದ್ದಾರೆ.










