ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ…!

134
firstsuddi

ಮಂಗಳೂರು : ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಐಎಸ್‍ಎಫ್, ಭದ್ರತಾ ಪಡೆಗಳು ಸಂಪೂರ್ಣ ಪರಿಶೀಲನೆ ನಡೆಸಿವೆ. ಇದೊಂದು ಹುಸಿ ಬೆದರಿಕೆ ಎನ್ನಲಾಗಿದ್ದು, ಭದ್ರತಾ ತಪಾಸಣೆ ಹೆಚ್ಚಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ್ ಅವರ ಮೊಬೈಲ್ ಗೆ ಕರೆ ಮಾಡಿದ ವ್ಯಕ್ತಿ, ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದು, ಕೂಡಲೇ ಅವರು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಬಾಂಬ್ ಕರೆಯಾಗಿದೆ ಎಂದು ದೃಢಪಟ್ಟಿದೆ.