ತುಮಕೂರು : ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಹೆಚ್.ಡಿ. ದೇವೇಗೌಡ ಅವರು ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದು, ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಜಾರಿಗೆ ತಂದಿರುವ ಸರ್ಕಾರ ರೈತ ಸಮುದಾಯಕ್ಕೆ ಮಾರಕವಾಗಿದ್ದು, ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.










