ದೇಶದಲ್ಲಿ ಒಂದೇ ದಿನ 61,408 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 31,06,349 ಕ್ಕೆ ಏರಿಕೆ…

140
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,408 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 31,06,349 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 836 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 57,542ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 31,06,349 ಮಂದಿ ಸೋಂಕಿತರ ಪೈಕಿ 23,38,036 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.