ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್…

113
firstsuddi

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಕಳೆದ ನಾಲ್ಕು ದಿನದಿಂದ ಬೆನ್ನು ನೋವು ಹಾಗೂ ಜ್ವರದಿಂದ ಬಳಲುತ್ತಿದ್ದ ಡಿ.ಕೆ ಶಿವಕುಮಾರ್ ಅವರು ಎರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ದೃಢವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.