ಕೋಲುಮಂಡೆ ಹಾಡು ವಿವಾದ-ಚಂದನ್ ಶೆಟ್ಟಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

177
firstsuddi

ಬೆಂಗಳೂರು : ಮಲೆಮಹಾದೇಶ್ವರ ಸ್ವಾಮಿಯ ಕೋಲುಮಂಡೆ ಹಾಡಿನ ವಿವಾದಕ್ಕೆ ಸಂಬಂಶಿಸಿದಂತೆ ಕನ್ನಡದ ರ್ಯಾಪರ್ ಚಂದನ್ ಶೆಟ್ಟಿ ಅವರ ವಿರುದ್ಧ ಮಲೆ ಮಹಾದೇಶ್ವರ ಸ್ವಾಮಿ ಭಕ್ತರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಗಣೇಶ್ ಹಬ್ಬದಂದು ಚಂದನ್ ಶೆಟ್ಟಿ ಸಂಗೀತ ನಿರ್ದೇಶನದ ಕೋಲುಮಂಡೇ ಹಾಡನ್ನು ಯೂಟ್ಯೂಬ್‍ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದನ್ನು ವೀಕ್ಷಿಸಿದ ಮಲೆಮಹಾದೇಶ್ವರ ಸ್ವಾಮಿ ಭಕ್ತರು ಹಾಡಿನಲ್ಲಿ ಶರಣೆ ಸಂಕಮ್ಮ ಅವರನ್ನು ಅಶ್ಲೀಲವಾಗಿ ಪ್ರದರ್ಶಿಸಲಾಗಿದೆ. ಮಲೆಮಹಾದೇಶ್ವರ ಸ್ವಾಮಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಚಂದನ್ ಶೆಟ್ಟಿ ಅವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದು, ದೂರನ್ನು ಸ್ವೀಕರಿಸಿದ ಪೊಲೀಸರು ಎನ್‍ಸಿಆರ್ ದಾಖಲಿಸಿಕೊಂಡು ಕಾನೂನು ತಜ್ಞರ ಸಲಹೆ ಪಡೆದುಕೊಂಡು ಬಳಿಕ ಎಫ್‍ಐಆರ್ ದಾಖಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.