ಧಾರವಾಡ : ನ್ಯೂಯಾರ್ಕ್‍ನಲ್ಲಿ ನೆಲೆಸಿರುವ ಧಾರವಾಡ ಮೂಲದ ದಂಪತಿ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್‍ನ್ನು ತೆರೆಯಲು 32.30 ಲಕ್ಷ ರೂ. ಹಣವನ್ನು ಕೊಡುಗೆಯಾಗಿ ನೀಡಿದ್ದಾರೆ. ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮೆರೆಯುತ್ತಲೇ ಇದ್ದು, ಇದರಿಂದ ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ಸೋಂಕಿತರು ನಡು ರಸ್ತೆಯಲ್ಲೇ ಜೀವ ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಧಾರವಾಡದಲ್ಲಿ ಕೊರೊನಾ ವಾರ್ಡ್ ಸ್ಥಾಪಿಸಲು ನ್ಯೂಯಾರ್ಕ್‍ನಲ್ಲಿ ನೆಲೆಸಿರುವ ಧಾರವಾಡ ಮೂಲದ ರವಿ ಮತ್ತು ಜಯಾ ದಂಪತಿ 32.30 ಲಕ್ಷ ರೂ. ಹಣವನ್ನು ಕೊಡುಗೆಯಾಗಿ ನೀಡಿದ್ದಾರೆ.
ಈ ಕುರಿತು ಧಾರವಾಡ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ತಿಳಿಸಿದ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಡಾ. ಕವನ್ ದೇಶಪಾಂಡೆ ಅವರು, ಕೋವಿಡ್ ವಾರ್ಡ್ ಸ್ಥಾಪಿಸಲು ರವಿ ಮತ್ತು ಜಯಾ ದಂತಿ 32.30 ಲಕ್ಷ ರೂ. ಹಣವನ್ನು ಕೊಡುಗೆಯಾಗಿ ನೀಡಿದ್ದು, ಈ ಕೋವಿಡ್ ವಾರ್ಡ್ ರವಿ ಮತ್ತು ಜಯಾ ಭೂಪಳಾಪುರ ಅವರ ಹೆಸರಿನಲ್ಲಿಯೇ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.










