ಬೆಂಗಳೂರು : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ಸಚಿವ ಈಶ್ವರಪ್ಪ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದು, ನನಗೆ ಇಂದು ಕರೊನಾ ಸೋಂಕು ದೃಡಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa) September 1, 2020










