ಹೈದರಾಬಾದ್ : ಮರಳು ತುಂಬಿದ್ದ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಪಸರಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಕೇಶ್, ಪವನ್, ಪ್ರವೀಣ್, ರಹೀಂ ಹಾಗೂ ರೋಹಿತ್ ಎಂದು ಗುರುತಿಸಲಾಗಿದೆ. ಮೃತರು ಕಾರಿನಲ್ಲಿ ಟಾಲಿವುಡ್ ನಟ ಪವನ್ ಕಲ್ಯಾಣ್ ಅವರ ಹುಟ್ಟುಹಬ್ಬದ ಸಮಾರಂಭದ ಸಿದ್ಧತೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.










