ಸ್ಯಾಂಡಲ್‍ವುಡ್ ನಟಿ ಶರ್ಮಿಳಾ ಮಂಡ್ರೆ ಅವರಿಗೆ ಕೊರೊನಾ ದೃಢ…

138
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ಶರ್ಮಿಳಾ ಮಾಂಡ್ರೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ನಟಿ ಶರ್ಮಿಳಾ ಮಾಂಡ್ರೆ ಅವರೇ ತಮ್ಮ ಟ್ವಿಟರ್ ಖಾತೆಯ ಮೂಲಕ ಸ್ಪಷ್ಟಪಡಿಸಿದ್ದಾರೆ. ನನಗೆ ಹಾಗೂ ನನ್ನ ಕುಟುಂಬದ ಕೆಲವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಮಗೆ ರೋಗ ಲಕ್ಷಣಗಳು ಹೆಚ್ಚು ಇಲ್ಲದಿರುವ ಕಾರಣ ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇವೆ. ವೈದ್ಯರ ಸಲಹೆಯಂತೆ ನಾನು ಸೆಲ್ಫ್ ಕ್ವಾರಂಟೈನ್ ಆಗಿದ್ದೇನೆ. ವೈದ್ಯರ ಸಲಹೆಯಂತೆ ನಾನು ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.