ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಆರೋಪ-ನಟಿ ರಾಗಿಣಿ ದ್ವಿವೇದಿ ನಿವಾಸದ ಮೇಲೆ ಸಿಸಿಬಿ ದಾಳಿ…

122
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ನಟಿ ರಾಗಿಣಿ ದ್ವಿವೇದಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿರುವ ನಟಿ ರಾಗಿಣಿ ಅವರ ನಿವಾಸದ ಮೇಲೆ ಪೊಲೀಸರು ಹಾಗೂ 5-6 ಮಂದಿ ಸಿಸಿಬಿ ಅಧಿಕಾರಿಗಳು ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ. ಸಿಸಿಬಿ ಅಧಿಕಾರಿಗಳು ನಿನ್ನೆ ರಾಗಿಣಿ ಅವರ ಆಪ್ತ ರವಿಶಂಕರ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ರವಿಶಂಕರ್ ನೀಡಿದ ಮಾಹಿತಿಯ ಆಧಾರದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿ ಮನೆಯನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದ್ದಾರೆ. ದಾಳಿ ವೇಳೆ ನಟಿ ರಾಗಿಣಿ ಅವರಿಗೆ ಸೇರಿದ 4 ಮೊಬೈಲ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.