ಸಚಿವ ಕೆ.ಎಸ್. ಈಶ್ವರಪ್ಪ ಕೊರೊನಾದಿಂದ ಗುಣಮುಖ-ಆಸ್ಪತ್ರೆಯಿಂದ ಡಿಸ್ಚಾರ್ಜ್…

141
firstsuddi

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಚಿವ ಈಶ್ವರಪ್ಪ ಅವರಿಗೆ ಸೆ.1ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ವೈದ್ಯರ ಸಲಹೆಯಂತೆ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗಾ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.