ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲೆಯ 95,735 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44,65,864ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,172 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 75062 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 44,65,864ಮಂದಿ ಸೋಂಕಿತರ ಪೈಕಿ 34,71,784ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 9,19,018ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










