ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ದೃಢ…

139
firstsuddi

ಬೆಂಗಳೂರು : ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಚಿವ ಪ್ರಭು ಚೌಹಾಣ್ ಅವರ ಕಾರು ಚಾಲಕನಿಗೆ ಸೋಂಕು ತಗುಲಿತ್ತು. ಇದರಿಂದ ಪ್ರಭು ಚೌಹಾಣ್ ಅವರು ನಿನ್ನೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಅಲ್ಲದೇ ಸಚಿವರ ಗನ್ ಮ್ಯಾನ್ ಹಾಗೂ ಆಪ್ತ ಸಹಾಯಕನಿಗೂ ಸೋಂಕು ತಗುಲಿದೆ. ಪ್ರಭು ಚೌಹಾಣ್ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ, ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್‍ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.