ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ : ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಮತ್ತೆ 3 ದಿನ ಸಿಸಿಬಿ ಕಸ್ಟಡಿಗೆ…

221
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರನ್ನು 1ನೇ ಎಸಿಎಂಎಂ ನ್ಯಾಯಾಲಯ ಮತ್ತೆ 3 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಸಂಜನಾ ಗಲ್ರಾನಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರನ್ನು 3 ದಿನ ಸಿಸಿಬಿ ವಶಕ್ಕೆ ನೀಡಿದ್ದಾರೆ. ಸಿಸಿಬಿ ಪರ ವಕೀಲರು ನಟಿಯರು ನಾವು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿಲ್ಲ. ಡ್ರಗ್ಸ್ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಹಾರಿಕೆ ಉತ್ತರವನ್ನು ನೀಡಿದ್ದಾರೆ. ಹೀಗಾಗಿ 5 ದಿನ ನಮ್ಮ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ವಾದವನ್ನು ಆಲಿಸಿದ ನ್ಯಾಯಧೀಶರು ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರನ್ನು 3 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.