ರಾಜಸ್ಥಾನ : ಸೇನಾಧಿಕಾರಿಯ ವಾಹನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಉರುಳಿ ಬಿದ್ದು ಇಬ್ಬರು ಅಧಿಕಾರಿಗಳು ಮೃತಪಟ್ಟಿರುವ ಘಟನೆ ಬಿಕನಾರ್-ಜೈಪುರ ಹೆದ್ದಾರಿಯಲ್ಲಿ ನಡೆದಿದೆ. ಮೃತ ಅಧಿಕಾರಿಗಳನ್ನು ಕರ್ನಲ್ ಮನೀಶ್ ಸಿಂಗ್ ಚೌವ್ಹಾಣ್ ಹಾಗೂ ಮೇಜರ್ ನೀರಜ್ ಶರ್ಮಾ ಎಂದು ಗುರುತಿಸಲಾಗಿದೆ. ಸ್ಥಳದಲ್ಲೇ ಇಬ್ಬರು ಅಧಿಕಾರಿಗಳು ಮೃತಟ್ಟಿದ್ದರೆ, ಇನ್ನು ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಸೇನಾ ವಾಹನ ಸಂಪೂರ್ಣ ಜಖಂ ಗೊಂಡಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಗೊಂಡ ಅಧಿಕಾರಿಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.










