ಚಿಕ್ಕಮಗಳೂರು : ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಬಸವನಹಳ್ಳಿ ಪೊಲೀಸರು…

178
firstsuddi

ಚಿಕ್ಕಮಗಳೂರು : ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಸವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಗೌರಿ ಕಾಲುವೆ ನಿವಾಸಿ ಹನೀಫ್ ಎಂದು ಗುರುತಿಸಲಾಗಿದ್ದು, ಬಂಧಿತ ಆರೋಪಿ ತಮ್ಮ ಮನೆಯ ಪಕ್ಕದಲ್ಲಿ ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಈ ಕುರಿತು ಖಚಿತ ಮಾಹಿತಿ ತಿಳಿದ ಬಸವನಹಳ್ಳಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತನಿಂದ 2 ಕೆ.ಜಿ 250 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.