ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ : ನಟಿ ರಾಗಿಣಿ, ಸಂಜನಾ ಗಲ್ರಾನಿಗೆ 14ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ…

170
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದಿನ ನಟಿಯರ ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆ, ಪೊಲೀಸರು ಇಬ್ಬರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ನಟಿಯರಿಗೆ 14ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದು, ಇಬ್ಬರು ಪರಪ್ಪನ ಅಗ್ರಹಾರ ಜೈಲಿಗೆ ಸೇರಲಿದ್ದಾರೆ.