ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿಗೆ ಸಿಸಿಬಿ ನೋಟೀಸ್ ನೀಡಿದೆ. ಐಂದ್ರಿತಾ ರೇ ಅವರು ಕಳೆದ ಎರಡು ದಿನಗಳ ಹಿಂದೆ ಶ್ರೀಲಾಂಕದ ಕ್ಯಾಸಿನೋಗೆ ತೆರಳಿದ್ದ ವೀಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಾಗೂ ಡ್ರಗ್ ಪ್ರಕರಣದ ಆರೋಪಿ ಶೇಖ್ ಫಾಝಿಲ್ ಜೊತೆಗೆ ತೆಗೆಸಿಕೊಂಡಿರುವ ಫೋಟೋಗಳೂ ಕೂಡಾ ಸಿಕ್ಕಿದ್ದು, ಈ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ನಟಿ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿಗೆ ನಾಳೆ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ.










